🌺🌺🌺🌺🌺🌺🌺🌺🌺🌺🌺🌺🌺🌺🌺🌺
ಆತ್ಮೀಯ ಸ್ನೇಹಿತರೇ, ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಡಿಸೆಂಬರ್ 31ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ನಿರುದ್ಯೋಗಿ ಯುವಕ/ ಯುವತಿಯರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
🌺🌺🌺🌺🌺🌺🌺🌺🌺🌺🌺🌺🌺🌺🌺
ದಿನಾಂಕ:31-12-2020 ರಂದು ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜಿನ ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
🌺🌺🌺🌺🌺🌺🌺🌺🌺🌺🌺🌺🌺🌺🌺
ಕಲಬುರಗಿಯ ಸ್ವತಂತ್ರ ಮೈಕ್ರೋಫೈನಾನ್ಸ್‌ನಲ್ಲಿ ಫಿಲ್ಡ್ ಆಫೀಸರ್ ಹುದ್ದೆಗೆ ಪಿಯುಸಿ ಮತ್ತು ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಯೋಮಿತಿ 20 ರಿಂದ 26 ವರ್ಷದೊಳಗಿರಬೇಕು.
🌺🌺🌺🌺🌺🌺🌺🌺🌺🌺🌺🌺🌺🌺🌺🌺🌺🌺
ಬೆಂಗಳೂರಿನ ಕ್ವೆಸ್ ಕಾರ್ಪ್ ಲಿಮಿಟೆಡ್‌ನಲ್ಲಿ ಸೆಲ್ಸ್ ಪ್ರಮೋಟರ್, ಪ್ರೊಡಕ್ಷನ್ ಇಂಜಿನಿಯರ್, ಕ್ವಾಲಿಟಿ ಇಂಜಿನಿಯರ್, ಸೇಲ್ಸ್ ಡೆಮೋಸ್ಟ್ರೆಟರ್, ಟೆಲಿ ಕಾಲರ್, ಸಿ.ಆರ್.ಓ. ಹಾಗೂ ಇತರೆ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷ.
🌺🌺🌺🌺🌺🌺🌺🌺🌺🌺🌺🌺🌺🌺🌺🌺🌺🌺
ಬೆಂಗಳೂರಿನ ಎನ್.ಟಿ.ಟಿ.ಎಫ್.ದಲ್ಲಿ ಓಜೆಟಿ ಹುದ್ದೆಗೆ ಐಟಿಐ (ಫಿಟ್ಟರ್, ಟರ್ನರ್, ಮಶಿನಿಸ್ಟ್), ಪಿ.ಯು.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು.
🌺🌺🌺🌺🌺🌺🌺🌺🌺🌺🌺🌺🌺🌺🌺🌺🌺🌺
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ.
🌺🌺🌺🌺🌺🌺🌺🌺🌺🌺🌺🌺🌺🌺🌺🌺🌺🌺
ಹೆಚ್ಚಿನ ಮಾಹಿತಿಗಾಗಿ :
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08472-274846.
🌺🌺🌺🌺🌺🌺🌺🌺🌺🌺🌺🌺🌺🌺🌺🌺🌺🌺
No comments:
Post a Comment
If you have any doubts please let me know