10000 Karnataka PG Teachers Recruitment 2021
Teachers Recruitment 2021 : 10,000 Teacher Posts
ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 8 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು 2 ಸಾವಿರ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ, ಒಂದು ಸಾವಿರ ಶಾಲೆಗಳನ್ನು ಉಭಯ ಮಾಧ್ಯಮ ಶಾಲೆಗಳಾಗಿ ಬದಲಾಯಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳಲು ರಾಜ್ಯ ಶಾಲಾ ಶಿಕ್ಷಣ ಆಯೋಗ ಎಂಬ ಸ್ವಾಯತ್ತ ಸಂಸ್ಥೆ ಸ್ಥಾಪನೆ, 1995ರಿಂದ 2000ದವರೆಗೆ ಪ್ರಾರಂಭಗೊಂಡ ಕನ್ನಡ ಮಾಧ್ಯಮದ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಹಾಗೂ ರಾಜ್ಯದ 25 ಗ್ರಾಮ ಪಂಚಾಯತಿಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ 25 ವಾರ್ಡುಗಳಲ್ಲಿ ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ 5ರಿಂದ 12ನೇ ತರಗತಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪಂಚಾಯಿತಿ ಅಥವಾ ವಾರ್ಡ್ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಅನುಮತಿ ಕೋರಿ ಪ್ರಸ್ತಾವ ಸಲ್ಲಿಸಲು ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಶಿಕ್ಷಣ ಇಲಾಖೆಯ 2021-22 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಇಲಾಖೆಯ ಆಯುಕ್ತ ಅನ್ಬುಕುಮಾರ್, ಸಮಗ್ರ ಶಿಕ್ಷಣ ಕರ್ನಾಟಕದ ನಿರ್ದೇಶಕಿ ದೀಪಾ ಚೋಳನ್, ಪದವಿಪೂರ್ವ ಶಿಕ್ಷಣ ನಿರ್ದೇಶಕಿ ಸ್ನೇಹಲ್, ಲೋಕ ಶಿಕ್ಷಣ ನಿರ್ದೇಶಕಿ ಸುಷ್ಮಾ ಗೋಡಬೋಲೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಮುಂದಿನ ಎರಡು ವಾರಗಳಲ್ಲಿ ಪ್ರಸ್ತಾವನೆ ಸಿದ್ಧಪಡಿಸುವುದಾಗಿ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಈ ಪ್ರಸ್ತಾವಗಳಿಗೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿಗೆ ನೀಡಿದರೆ ಮುಂದಿನ ಬಜೆಟ್‍ನಲ್ಲಿ ಈ ಅಂಶಗಳು ಸೇರ್ಪಡೆಯಾಗಿ ಸೂಕ್ತ ಅನುದಾನವೂ ದೊರೆಯಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.
No comments:
Post a Comment
If you have any doubts please let me know