Most Important Notes

Breaking

Ads

Click Here to Join our Telegram Channel

Weekly Updates

Search this Blog

Edutube Kannada ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ Edutube Kannada ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Thursday, 7 January 2021

Dakshina Kannada Anganawadi Worker And Helper 60 Posts apply now

ದಕ್ಷಿಣ ಕನ್ನಡ ದಲ್ಲಿವೆ 60 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು : ಈಗಲೇ ಅರ್ಜಿ ಸಲ್ಲಿಸಿ...!!






ಉದ್ಯೋಗದ ಹುಡುಕಾಟದಲ್ಲಿರುವ ಮಹಿಳೆಯರಿಗೆ ಶುಭಸುದ್ದಿ...!!! ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ರಿಯಲ್ಲಿವೆ ಭರ್ಜರಿ 60 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳು. ಈಗಲೇ ಅರ್ಜಿ ಸಲ್ಲಿಸಿ ಮತ್ತು ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ..!!!

🌼🌼🌼🌼🌼🌼🌼🌼🌼🌼🌼🌼🌼

ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ 2021ನೇ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಫೆಬ್ರವರಿ 06, 2021ರೊಳಗೆ ಅರ್ಜಿ ಸಲ್ಲಿಸಬಹುದು.

🌼🌼🌼🌼🌼🌼🌼🌼🌼🌼🌼🌼🌼

ಹುದ್ದೆಗಳ ವಿವರ ಹೀಗಿದೆ :

🌺 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು - 15

🌺 ಅಂಗನವಾಡಿ ಸಹಾಯಕಿಯರ ಹುದ್ದೆಗಳು - 45

🌺 ಒಟ್ಟು ಹುದ್ದೆಗಳು - 60

🌼🌼🌼🌼🌼🌼🌼🌼🌼🌼🌼🌼🌼

🌼🌼🌼🌼🌼🌼🌼🌼🌼🌼🌼🌼🌼

ನೆನಪಿರಲಿ :

ಸಹಾಯಕಿ ಹುದ್ದೆಗೆ ಅಂಗವಿಕಲರು ಅರ್ಹರಾಗಿರುವುದಿಲ್ಲ.
ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ (ತಹಸೀಲ್ದಾರ್ ಕಚೇರಿಯಿಂದ ಪಡೆದದ್ದು), ಜಾತಿ ಪ್ರಮಾಣಪತ್ರವನ್ನು ಸಲ್ಲಿಸಬೇಕು.

ಈ ಮೀಸಲಾತಿಗಳೂ ಅನ್ವಯಿಸುತ್ತವೆ :

ಅಭ್ಯರ್ಥಿಗಳು ವಿಧವೆ, ವಿಚ್ಛೇದಿತೆ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ದೇವದಾಸಿಯರ ಮಕ್ಕಳು, ಅಂಗವಿಕಲರಾಗಿದ್ದಲ್ಲಿ ಸರ್ಕಾರದಿಂದ ದೃಢೀಕರಿಸಿದ ಪ್ರಮಾಣಪತ್ರ, ಪರಿತ್ಯಕ್ತೆ ಎಂದು ಗ್ರಾಪಂನಿಂದ ನೀಡಿದ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಸೀಲ್ದಾರ್ ಅವರಿಂದ ಪಡೆದ ಪತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು. ಈ ಪ್ರಮಾಣಪತ್ರಗಳನ್ನು ಆಯಾ ಮೀಸಲಾತಿಗೆ ಪರಿಗಣಿಸಲಾಗುತ್ತದೆ.


ಆಯ್ಕೆಯ ಆದ್ಯತೆ:

ಈ ಕೆಳಕಂಡಂತೆ ಆದ್ಯತೆ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆ ಹೊಂದಿದ್ದು ವಯೋಮಿತಿ ಹಾಗೂ ಸ್ಥಳೀಯರಾಗಿರುವುದು ಕಡ್ಡಾಯ.


ಆಸಿಡ್ ದಾಳಿಗೊಳಗಾದವರ ಆಯ್ಕೆ:


ಆಸಿಡ್ ದಾಳಿಗೆ ಒಳಗಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ಮೊದಲ ಅದ್ಯತೆ ಮೇರೆಗೆ ನೇರವಾಗಿ ಅವರನ್ನೇ ಆಯ್ಕೆ ಮಾಡತಕ್ಕದ್ದು.


ಇಲಾಖೆಯ ಸಂಸ್ಥೆಗಳ ನಿವಾಸಿಗಳ ಆದ್ಯತೆ:


ಬಾಲ ನ್ಯಾಯ ಕಾಯ್ದೆಯಡಿ ಇಲಾಖೆಯ ಸಂಸ್ಥೆಗಳಲ್ಲಿ / ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದ ಹಾಲಿ /ಮಾಜಿ ನಿವಾಸಿಗಳಿಗೆ ಎರಡನೇ ಆದ್ಯತೆ.


ವಿಧವೆಯರ ಆದ್ಯತೆ:


ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಇತರೆ ವಿಧವೆಯರನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಿದ ನಂತರ ವಿಧವೆಯರಾದಲ್ಲಿ ಪರಿಗಣಿಸಲಾಗುವುದಿಲ್ಲ. ವಿಧವೆಯರು ತಾವು ಎಲ್ಲಿ ವಾಸವಾಗಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ವಿಧವೆಯರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.


ಅಂಗವಿಕಲ ಅಭ್ಯರ್ಥಿಗಳಿಗೆ ಆದ್ಯತೆ:


ಅಂಗನವಾಡಿ ಕಾರ್ಯಕರ್ತೆಯು 3 ರಿಂದ 6 ವರ್ಷದ ಮಕ್ಕಳಿಗೆ ಆಟ ಮತ್ತು ಅಭಿನಯ ಗೀತೆಗಳ ಮೂಲಕ ಶಾಲಾ ಪೂರ್ವ ಶಿಕ್ಷಣವನ್ನು ನೀಡಲಾಗುತ್ತಿದ್ದು, ಚಟುವಟಿಕೆ ವೇಳೆಯಲ್ಲಿ ಮಕ್ಕಳನ್ನು ಹಿಡಿದೆತ್ತಿ ನಿಲ್ಲಿಸಲು ಹಾಗೂ ಅಭಿನಯ ಮಾಡಿ ತೋರಿಸಬೇಕಾಗುತ್ತದೆ. ವೃತ್ತ ಸಭೆ, ತಾಯಂದಿರ ಸಭೆ ಮತ್ತು ಮನೆ ಭೇಟಿ ನಿರ್ವಹಿಸಬೇಕಾಗುತ್ತದೆ. ಆದ ಕಾರಣ ಕಿವುಡರು, ಮೂಕರು, ಬುದ್ಧಿಮಾಂದ್ಯರು, ಮಾನಸಿಕ ಅಸ್ವಸ್ಥರು, ಕಾರ್ಯಕರ್ತೆ ಹುದ್ದೆಗೆ ಅರ್ಹರಿರುವುದಿಲ್ಲ. ಇತರೆ ದೈಹಿಕ ಅಂಗವಿಕಲ್ ಶೇ.60% ಮೀರದಂತೆ ಇರುವವರು ಮತ್ತು ಶಾಲಾಪೂರ್ವ ಶಿಕ್ಷಣ ನಡೆಸಲು ಸಮರ್ಥವಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಈ ಕುರಿತು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ಅಂಗವಿಕಲರು ಪ್ರಸ್ತುತ ತಾವು ಎಲ್ಲಿ ವಾಸವಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಅಂಗವಿಕಲ ಅಭ್ಯರ್ಥಿಗಳ ಅಂಗವಿಕಲತೆ ಪ್ರಮಾಣದ ಬಗ್ಗೆ ಸಂಶಯ ಉಂಟಾದಲ್ಲಿ ಪುನರ್ ಪರಿಶೀಲಿಸುವ ಅಧಿಕಾರವನ್ನು ಆಯ್ಕೆ ಸಮಿತಿ ಹೊಂದಿರುತ್ತದೆ. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ಅಂಗವಿಕಲರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.


🌼🌼🌼🌼🌼🌼🌼🌼🌼🌼🌼🌼🌼

ವಿದ್ಯಾರ್ಹತೆ ಏನಿರಬೇಕು :

🍀 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ,
🍀 ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ. ಕನ್ನಡ ಭಾಷೆ ಜ್ಞಾನ ಅವಶ್ಯ.

ವಯೋಮಿತಿ ಎಷ್ಟಿರಬೇಕು :

18 ರಿಂದ 35 ವರ್ಷ. ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇದೆ.


🌼🌼🌼🌼🌼🌼🌼🌼🌼🌼🌼🌼🌼


ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ:

ವಿದ್ಯಾರ್ಹತೆ, ವಯೋಮಿತಿ, ಆಸಿಡ್ ದಾಳಿಗೆ ತುತ್ತಾದವರು, ಇಲಾಖೆಯ ಸಂಸ್ಥೆಗಳಲ್ಲಿ ಹಾಗೂ ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ವಿಧವೆಯರಿಗೆ, ಸ್ಥಳೀಯರಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು.


🌼🌼🌼🌼🌼🌼🌼🌼🌼🌼🌼🌼🌼


ಇವುಗಳು ಗೌರವಧನ ಆಧಾರಿತ ಹುದ್ದೆ :

ಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. 

🏵 ಅಂಗನವಾಡಿ ಕಾರ್ಯಕರ್ತೆಗೆ ಮಾಸಿಕ 10,000ರೂ,
🏵 ಮಿನಿ ಅಂಗನವಾಡಿ ಕಾರ್ಯಕರ್ತೆಗೆ 5,750 ರೂ.,
🏵 ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.

🌼🌼🌼🌼🌼🌼🌼🌼🌼🌼🌼🌼🌼

ಪ್ರಮುಖ ದಿನಾಂಕಗಳು : 

🌸 ಅರ್ಜಿ ಸಲ್ಲಿಸಲು ಕೊನೇ ದಿನ: 06 ಫೆಬ್ರವರಿ 2021




ಮಾಹಿತಿಗೆ: https://anganwadirecruit.kar.nic.in


 🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


















(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ


💥  ನಮ್ಮ ಎಲ್ಲಾ Social Media links 💥

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...





















ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ







No comments:

Post a Comment

If you have any doubts please let me know

ಪಿಡಿಎಫ್ ನೋಟ್ಸ್ ಗಳು ಡೌನ್‍ಲೋಡ್ ಆಗುತ್ತಿಲ್ಲವೇ? ಹಾಗಾದರೆ ಈ ವೀಡಿಯೋ ನೋಡಿ

Popular Posts

Facebook

Buy Products

ಪ್ರಚಲಿತ ಪೋಸ್ಟ್‌ಗಳು

Most Useful Notes

Labels

Buy Products

Random Posts

Buy Products

Most Useful Notes

Recent Posts

Useful PDF Notes

Important PDF Notes

Ads