Vijayapura Anganwadi Recruitment 2021: 134 Anganwadi Helper & Assistant Post APPLY NOW
ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭ ಸುದ್ದಿ..!!! ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 7 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 20 ಅಂಗನವಾಡಿ ಕಾರ್ಯಕರ್ತೆ ಹಾಗೂ 114 ಅಂಗನವಾಡಿ ಸಹಾಯಕಿಯರ ಸೇರಿದಂತೆ ಒಟ್ಟು 134 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸದರಿ ಹುದ್ದೆಗಳು ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಮಹಿಳೆಯರು ಇದೇ ಏಪ್ರಿಲ್ 3, 2021 ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪೂರೈಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥
ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ : 134
➡ ಅಂಗನವಾಡಿ ಕಾರ್ಯಕರ್ತೆ - 20
➡ ಅಂಗನವಾಡಿ ಸಹಾಯಕಿ - 114
➡ ಒಟ್ಟು - 134
ಆಯ್ಕೆಯ ಆದ್ಯತೆ: :
ಆದ್ಯತೆ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗೆ ನಿಗದಿಪಡಿಸಿದ ನಿಗದಿತ ವಿದ್ಯಾರ್ಹತೆ ಹೊಂದಿದ್ದು ವಯೋಮಿತಿ ಹಾಗೂ ಸ್ಥಳೀಯರಾಗಿರುವುದು ಕಡ್ಡಾಯವಾಗಿದೆ.
ಆಸಿಡ್ ದಾಳಿಗೊಳಗಾದವರ ಆಯ್ಕೆ:
ಆಸಿಡ್ ದಾಳಿಗೆ ಒಳಗಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ಮೊದಲ ಅದ್ಯತೆ ಮೇರೆಗೆ ಅವರನ್ನೇ ನೇರವಾಗಿ ಆಯ್ಕೆ ಮಾಡಲಾಗುತ್ತದೆ.
𝟴𝟰𝟭 𝗢𝗙𝗙𝗜𝗖𝗘 𝗔𝗧𝗧𝗘𝗡𝗗𝗔𝗡𝗧 𝗩𝗔𝗖𝗔𝗡𝗖𝗜𝗘𝗦 𝗜𝗡 𝗥𝗕𝗜 : 𝗔𝗣𝗣𝗟𝗬 𝗡𝗢𝗪 || ಆರ್ಬಿಐ ನಲ್ಲಿವೆ 841 ಆಫೀಸ್ ಅಟೆಂಡೆಂಟ್ ಹುದ್ದೆಗಳು
ಇಲಾಖೆಯ ಸಂಸ್ಥೆಗಳ ನಿವಾಸಿಗಳ ಆದ್ಯತೆ:
ಬಾಲ ನ್ಯಾಯ ಕಾಯ್ದೆಯಡಿ ಇಲಾಖೆಯ ಸಂಸ್ಥೆಗಳಲ್ಲಿ / ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದ ಹಾಲಿ /ಮಾಜಿ ನಿವಾಸಿಗಳಿಗೆ ಎರಡನೇ ಆದ್ಯತೆ.
ವಿಧವೆಯರ ಆದ್ಯತೆ:
ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಇತರೆ ವಿಧವೆಯರನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಿದ ನಂತರ ವಿಧವೆಯರಾದಲ್ಲಿ ಪರಿಗಣಿಸಲಾಗುವುದಿಲ್ಲ. ವಿಧವೆಯರು ತಾವು ಎಲ್ಲಿ ವಾಸವಾಗಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ವಿಧವೆಯರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುತ್ತದೆ.
ಅಂಗವಿಕಲ ಅಭ್ಯರ್ಥಿಗಳಿಗೆ ಆದ್ಯತೆ:
ಅಂಗನವಾಡಿ ಕಾರ್ಯಕರ್ತೆಯು 3 ರಿಂದ 6 ವರ್ಷದ ಮಕ್ಕಳಿಗೆ ಆಟ ಮತ್ತು ಅಭಿನಯ ಗೀತೆಗಳ ಮೂಲಕ ಶಾಲಾ ಪೂರ್ವ ಶಿಕ್ಷಣವನ್ನು ನೀಡಲಾಗುತ್ತಿದ್ದು, ಚಟುವಟಿಕೆ ವೇಳೆಯಲ್ಲಿ ಮಕ್ಕಳನ್ನು ಹಿಡಿದೆತ್ತಿ ನಿಲ್ಲಿಸಲು ಹಾಗೂ ಅಭಿನಯ ಮಾಡಿ ತೋರಿಸಬೇಕಾಗುತ್ತದೆ. ವೃತ್ತ ಸಭೆ, ತಾಯಂದಿರ ಸಭೆ ಮತ್ತು ಮನೆ ಭೇಟಿ ನಿರ್ವಹಿಸಬೇಕಾಗುತ್ತದೆ. ಆದ ಕಾರಣ ಕಿವುಡರು, ಮೂಕರು, ಬುದ್ಧಿಮಾಂದ್ಯರು, ಮಾನಸಿಕ ಅಸ್ವಸ್ಥರು, ಕಾರ್ಯಕರ್ತೆ ಹುದ್ದೆಗೆ ಅರ್ಹರಿರುವುದಿಲ್ಲ.
ಇತರೆ ದೈಹಿಕ ಅಂಗವಿಕಲತೆ ಅಂದರೆ ಶೇ.60% ಮೀರದಂತೆ ಇರುವವರು ಮತ್ತು ಶಾಲಾಪೂರ್ವ ಶಿಕ್ಷಣ ನಡೆಸಲು ಸಮರ್ಥವಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ.
ಈ ಕುರಿತು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ಅಂಗವಿಕಲರು ಪ್ರಸ್ತುತ ತಾವು ಎಲ್ಲಿ ವಾಸವಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಅಂಗವಿಕಲ ಅಭ್ಯರ್ಥಿಗಳ ಅಂಗವಿಕಲತೆ ಪ್ರಮಾಣದ ಬಗ್ಗೆ ಸಂಶಯ ಉಂಟಾದಲ್ಲಿ ಪುನರ್ ಪರಿಶೀಲಿಸುವ ಅಧಿಕಾರವನ್ನು ಆಯ್ಕೆ ಸಮಿತಿ ಹೊಂದಿರುತ್ತದೆ.
ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ಅಂಗವಿಕಲರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.
ವಯೋಮಿತಿ :
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 01-02-2021ಕ್ಕೆ ಅನ್ವಯಿಸುವಂತೆ 18 ರಿಂದ 25 ವರ್ಷಗಳ ವಯೋಮಿತಿ ಹೊಂದಿರಬೇಕು. ಅಂದರೆ ಅಭ್ಯರ್ಥಿಗಳು 02-02-1996 ಕ್ಕಿಂತ ಮೊದಲು ಜನಿಸಿರಬಾರದು ಹಾಗೂ ೦1-02-2003 ರ ನಂತರ ಜನಿಸಿದವರಿಗೂ ಅನ್ವಯಿಸುವುದಿಲ್ಲ. ಅಂದರೆ 25 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಶೈಕ್ಷಣಿಕ ಅರ್ಹತೆ:
ಸದರಿ ಹುದ್ದೆಗಳಿಗೆ ಅರ್ಜಿ ಅಲ್ಲಿಸಬಯಸುವ ಮಹಿಳಾ ಅಭ್ಯರ್ಥಿಗಳು
ಅಂಗನವಾಡಿ ಕಾರ್ಯಕರ್ತೆ :
ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು.
ಅಂಗನವಾಡಿ ಸಹಾಯಕಿ :
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4 ನೇ ತರಗತಿ ಮತ್ತು ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು.
💥💥💥💥💥💥💥💥💥💥💥💥💥💥💥💥💥💥💥💥💥💥💥💥💥
ಅರ್ಜಿ ಶುಲ್ಕ :
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ :
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://anganwadirecruit.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 3, 2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
𝟴𝟰𝟭 𝗢𝗙𝗙𝗜𝗖𝗘 𝗔𝗧𝗧𝗘𝗡𝗗𝗔𝗡𝗧 𝗩𝗔𝗖𝗔𝗡𝗖𝗜𝗘𝗦 𝗜𝗡 𝗥𝗕𝗜 : 𝗔𝗣𝗣𝗟𝗬 𝗡𝗢𝗪 || ಆರ್ಬಿಐ ನಲ್ಲಿವೆ 841 ಆಫೀಸ್ ಅಟೆಂಡೆಂಟ್ ಹುದ್ದೆಗಳು
💥💥💥💥💥💥💥💥💥💥💥💥💥💥💥💥💥💥💥
: ಪ್ರಮುಖ ದಿನಾಂಕಗಳು : | |
---|---|
134 Anganwadi Worker Vacancies In Vijayapura | |
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ | 01-03-2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 03-04-2021 |
ಅರ್ಜಿ ಪರಿಶೀಲನೆಯ ದಿನಾಂಕ | 08-04-2021 |
ಅರ್ಹ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಪಡೆಯುವ ದಿನಾಂಕ | 15-04-2021 |
ಅಂತಿಮ ಆಯ್ಕೆ ಪಟ್ಟಿಗೆ ಅನುಮೋದನೆ ಪಡೆಯುವ ದಿನಾಂಕ | 04-05-2021 |
THANK YOU FOR VISITING EDUTUBEKANNADA.COM | |
💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥
CLICK HERE TO APPLY | |
---|---|
134 Anganwadi Worker Vacancies In Vijayapura | |
ಅಧಿಸೂಚನೆ / Notification | Click Here To Download |
ಅರ್ಜಿ ಸಲ್ಲಿಸಲು / Apply Now | Click Here To Apply |
RBI ನಲ್ಲಿವೆ 841 ಹುದ್ದೆಗಳು | Click Here to Apply |
Join Our Telegram Channel | Click Here to Join |
Our YouTube Channel | Click Here to Subscribe |
Our Facebook Page | Click Here to Follow |
THANK YOU FOR VISITING EDUTUBEKANNADA.COM | |
How to Download PDF : Here is Quick Links For Download | |
---|---|
Files | Download Links |
FDA GK QP 28-02-2021 PDF | Click Here to Download |
Spardha Vijetha January 2021 | Click Here to Download |
Spardha Vijetha February 2021 | Click Here to Download |
All Spardha Vijetha Magazines 2021 | Click Here to Download |
Our YouTube Channel | Click Here to Subscribe |
Our Facebook Page | Click Here to Follow |
THANK YOU FOR VISITING EDUTUBEKANNADA.COM | |
No comments:
Post a Comment
If you have any doubts please let me know