KARTET 2021 ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ : ಈಗಲೇ ಅರ್ಜಿ ಸಲ್ಲಿಸಿ
ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2021 Karnataka Teachers Eligibility Test 2021 ಗೆ ಅರ್ಜಿ ಆಹ್ವಾನ
ಸ್ನೇಹಿತರೆ, ಆರ್ಟಿಇ ಕಾಯ್ದೆ ಎರಡನೇ ವಿಭಾಗದಲ್ಲಿ ಷರತ್ತು (ಎನ್) ನಲ್ಲಿ ಉಲ್ಲೇಖಿಸಲ್ಪಟ್ಟಿರುವಂತೆ, ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು ಎಂಸಿಟಿ ವತಿಯಿಂದ ರೂಪಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸೂಕ್ತ ಸರಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅಂದರೆ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಸರ್ಕಾರವು ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (KARTET) ನಡೆಸುವ ಜವಾಬ್ದಾರಿಯನ್ನು ಕೇಂದ್ರೀಕೃತ ದಾಖಲಾತಿ ಘಟಕ (CAC) (Centralised Admission Cell) ಆಯುಕ್ತರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರಿಗೆ ವಹಿಸಿದೆ.
ಆಯ್ತಾ 2021ರ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮತ್ತು ಆಸಕ್ತ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸಲು ಇಲಾಖೆಯ ವೆಬ್ ಸೈಟ್ www.schooleducation.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ಸೂಚನೆಗಳು
1) ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2021ಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ದಿನಾಂಕ:01-07-2021 ರಿಂದ 20-07-2021 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.
2) ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಪೂರ್ಣ ವಿವರಗಳೊಂದಿಗೆ ಭರ್ತಿಮಾಡಿ ಸ್ಕ್ಯಾನ್ ಮಾಡಲಾದ ತಮ್ಮ ಭಾವಚಿತ್ರ ಹಾಗೂ ಸಹಿಯನ್ನು JPEG Format ನಲ್ಲಿ ಅಪ್‌ಲೋಡ್ ಮಾಡುವುದು.
3) ಆನ್‌ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಹಾಗೂ ಪೂರ್ಣ ವಿವರಗಳನ್ನೊಳಗೊಂಡ ಅರ್ಜಿಯ ಕಂಪ್ಯೂಟರ್ ಜನರೇಟೆಡ್ ಪ್ರತಿಯ ಪ್ರಿಂಟ್ ಔಟ್ ನ್ನು ತೆಗೆದುಕೊಳ್ಳುವುದು.
No comments:
Post a Comment
If you have any doubts please let me know