ಹುಯಿಲಗೋಳ ನಾರಾಯಣ ರಾಯರ ಜನ್ಮದಿನಾಚರಣೆ
ನಾರಾಯಣ ರಾಯರ ಜನನ:
> ಹುಯಿಲಗೋಳ ನಾರಾಯಣ ರಾಯರು ದಿನಾಂಕ 4ನೇ ಅಕ್ಟೋಬರ್ 1884, ರಂದು ಗದಗನಲ್ಲಿ ಜನಿಸಿದರು. ಈ ಮಹಾನ್ ಕರ್ತಾರನನ್ನು ನೆನೆಯುವುದು ನಮ್ಮ ಸೌಭಾಗ್ಯವೇ ಹೌದು.
ಹೆಸರುವಾಸಿ:
> ಹುಯಿಲಗೋಳ ನಾರಾಯಣರಾಯರು ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು.
> ಕರ್ನಾಟಕ ನಾಡಗೀತೆಯೆನಿಸಿದ್ದ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಗೀತೆಯನ್ನು ರಚಿಸಿದವರು.
> "ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು" ಗೀತೆಯನ್ನು ಕೇಳದ ಕನ್ನಡಿಗರೇ ಇಲ್ಲ. ಈ ಹಾಡು ಪ್ರಕಟಗೊಂಡ ದಿನದಿಂದ ಕನ್ನಡ ನಾಡಿನ ಹೆಸರಿನ ಜೊತೆಗೆ ಅಜರಾಮರವಾಗಿ, ಕನ್ನಡಿಗರ ನರ ನಾಡಿಗಳಲ್ಲಿ ಶಾಶ್ವತವಾಗಿ ನೆಲೆಯೂರಿ ಬಿಟ್ಟಿದೆ.
> ಕಾಳಿಂಗರಾಯರ ದನಿಯಲ್ಲಿ ಹೊರ ಹೊಮ್ಮಿದ ಈ ಹಾಡನ್ನು ಕನ್ನಡಿಗರು ಮರೆಯುವಂತೆಯೇ ಇಲ್ಲ.
> ಇದೇ ಹಾಡು ಡಾ. ಭೀಮಸೇನ ಜೋಷಿ ಮತ್ತು ಕೃಷ್ಣ ಹಾನಗಲ್ ಅವರ ಧ್ವನಿಯಲ್ಲೂ ಸೊಗಸಾಗಿ ಮೂಡಿ
ಬಂದಿದೆ. ಈ ಹಾಡಿನ ಕರ್ತೃ ಹುಯಿಲಗೋಳ ನಾರಾಯಣರಾಯರು.
ಉದಯವಾಗಲಿ ಗೀತೆ
> ಹುಯಿಲಗೋಳ ನಾರಾಯಣರು ರಚಿಸಿದ "ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು" ಗೀತೆ ಕರ್ನಾಟಕ ರಾಜ್ಯದ ನಾಡಗೀತೆಯೆಂದು ಖ್ಯಾತಿ ಪಡೆದಿತ್ತು. ಈ ಗೀತೆಯನ್ನು ಬೆಳಗಾವಿಯಲ್ಲಿ ಜರುಗಿದ, 1924ರ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಗಿತ್ತು. ಮಹಾತ್ಮ ಗಾಂಧಿಯವರು ಈ ಅಧಿವೇಶನದ ಅಧ್ಯಕ್ಷರಾಗಿದ್ದರು. ಆಗಿನ್ನೂ ಬಾಲಕಿಯಾಗಿದ್ದ ದಿವಂಗತ ಗಂಗೂಬಾಯಿ ಹಾನಗಲ್ ಈ ಗೀತೆಯನ್ನು ಅಂದು ಹಾಡಿದ್ದರು. ಇಂದೂ ಕೂಡ ಈ ಹಾಡು ಕನ್ನಡಿಗರ ಹೃದಯದಲ್ಲಿ ನೆಲೆನಿಂತಿದೆ.
ಸಾಹಿತ್ಯ
> ನಾರಾಯಣರಾಯರು ಮೂಲತಃ ನಾಟಕಕಾರರು. ಕನ್ನಡ ರಂಗಭೂಮಿಗಾಗಿ ಕಾಲ್ಪನಿಕ,ಐತಿಹಾಸಿಕ,ಪೌರಾಣಿಕ, ಸಾಮಾಜಿಕ ಹೀಗೆ ವಿವಿಧ ಬಗೆಯ ನಾಟಕಗಳನ್ನು ರಚಿಸಿ ಪ್ರದರ್ಶಿಸಿದರು. ಇವರ ಅನೇಕ ಕವನಗಳು ಅಂದಿನ ಪತ್ರಿಕೆಗಳಾದ ಜೈ ಕರ್ನಾಟಕ ವೃತ್ತ , ಪ್ರಭಾತ, ಧನಂಜಯ ಮೊದಲಾದವುಗಳಲ್ಲಿ ಪ್ರಕಟವಾಗಿವೆ.
ನಾಟಕಗಳು
> ನಾರಾಯಣರಾಯರು ಮೂಲತಃ ನಾಟಕಕಾರರು. ಕನ್ನಡ ರಂಗಭೂಮಿಗಾಗಿ ಕಾಲ್ಪನಿಕ, ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಹೀಗೆ ವಿವಿಧ ಬಗೆಯ ನಾಟಕಗಳನ್ನು ರಚಿಸಿ ಪ್ರದರ್ಶಿಸಿದರು.
> ಇವರ ಅನೇಕ ಕವನಗಳು ಅಂದಿನ ಪತ್ರಿಕೆಗಳಾದ 'ಜೈ ಕರ್ನಾಟಕ ವೃತ್ತ', 'ಪ್ರಭಾತ', 'ಧನಂಜಯ' ಮೊದಲಾದವುಗಳಲ್ಲಿ ಪ್ರಕಟವಾಗಿವೆ. ಜೊತೆಗೆ ನಾರಾಯಣರಾಯರು ತಮ್ಮ ನಾಟಕಗಳಿಗಾಗಿ ಗೀತೆಗಳನ್ನೂ ರಚಿಸುತ್ತಿದ್ದರು. ನಾರಾಯಣರಾಯರು 'ಮೂಡಲು ಹರಿಯಿತು' ಎಂಬ ಕಾದಂಬರಿಯನ್ನೂ ಬರೆದಿದ್ದರು. 'ಕನಕ ವಿಲಾಸ', 'ಪ್ರೇಮಾರ್ಜುನ', 'ಮೋಹಹರಿ', 'ಅಜ್ಞಾತವಾಸ', 'ಪ್ರೇಮ ವಿಜಯ', 'ಸಂಗೀತ', 'ಕುಮಾರರಾಮ ಚರಿತ', 'ವಿದ್ಯಾರಣ್ಯ', 'ಭಾರತ ಸಂಧಾನ', 'ಉತ್ತರ ಗೋಗ್ರಹಣ', 'ಧರ್ಮ ರಹಸ್ಯ', 'ಶಿಕ್ಷಣ ಸಂಭ್ರಮ', 'ಪತಿತೋದ್ಧಾರ' ಇವು ನಾರಾಯಣ ರಾಯರ ಪ್ರಮುಖ ನಾಟಕಗಳು.
ಪ್ರಶಸ್ತಿ ಹಾಗು ಗೌರವಗಳು
> ಮುಂಬಯಿ ಸರಕಾರವು ಪತಿತೋದ್ಧಾರ ನಾಟಕಕ್ಕೆ 1954ರಲ್ಲಿ ಬಹುಮಾನ ನೀಡಿತು.
> ಕಲೋಪಾಸಕ ಮಂಡಳಿಯಿಂದ ಸನ್ಮಾನ - 1952
> ಗದಗ - ಬೆಟಗೇರಿ ನಾಗರಿಕರಿಂದ ಸನ್ಮಾನ - 1935
> ಗದಗ ವಕೀಲರ ಸಂಗದಿಂದ - 1955
> ಕರ್ನಾಟಕ ಸರ್ಕಾರ ಪ್ರಥಮ ರಾಜ್ಯೋತ್ಸವ - 1956
> ಕನ್ನಡ ಸಾಹಿತ್ಯ ಪರಿಷತ್ತು -1961
ನಿಧನ
> ಹುಯಿಲಗೋಳ ನಾರಾಯಣರಾಯರು 4, ಜುಲೈ 1971 ರಂದು ಹುಬ್ಬಳ್ಳಿಯಲ್ಲಿ ನಿಧನರಾದರು.
No comments:
Post a Comment
If you have any doubts please let me know