Most Important Notes

Breaking

Ads

Click Here to Join our Telegram Channel

Weekly Updates

Search this Blog

Edutube Kannada ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ Edutube Kannada ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Tuesday 3 January 2023

ನಡೆದಾಡುವ ದೇವರ ಸರಳತೆ ನಿಮಗೆ ಗೊತ್ತೆ?: ಶ್ರೀ ಸಿದ್ದೇಶ್ವರ ಸ್ವಾಮಿಜಿಗಳು ಅಸ್ತಂಗತ

ನಡೆದಾಡುವ ದೇವರ ಸರಳತೆ ನಿಮಗೆ ಗೊತ್ತೆ?: ಶ್ರೀ ಸಿದ್ದೇಶ್ವರ ಸ್ವಾಮಿಜಿಗಳು ಅಸ್ತಂಗತ



ಶ್ರೀ ಸಿದ್ದೇಶ್ವರ ಸ್ವಾಮಿಜಿಗಳು


> ಶತಮಾನದ ಸಂತ, ದೇಶ ಕಂಡ ಎರಡನೇ ವಿವೇಕಾನಂದ ಎಂದೇಪೂ ಜಿಸಲ್ಪಡುವ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ.


ಸಿದ್ದೇಶ್ವರ ಶ್ರೀಗಳ ಜನನ ಸ್ಥಳ ಮತ್ತು ವಿದ್ಯಾಬ್ಯಾಸ


> ಶ್ರೀ ಸಿದ್ದೇಶ್ವರ ಸ್ವಾಮಿಜಿ ಅವರು ಈಗಿನ ಕರ್ನಾಟಕ ರಾಜ್ಯ ವಿಜಯಪೂರ ಜಿಲ್ಲೆ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಶ್ರೀ ಸಿದ್ಧೇಶ್ವರರು ಜನಿಸಿದರು. ಸಿದ್ಧಗೊಂಡಪ್ಪ ಇವರ ಬಾಲ್ಯದ ಹೆಸರು.

> ಊರಿನ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. ಬೆಳೆಯುವ ಪೈರು ಮೊಳಕೆಯಲ್ಲೇ' ಎಂಬಂತೆ ಬಾಲಕ ಸಿದ್ದೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು.

> ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಲಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದರು.


ಹೆಸರುವಾಸಿ /ಜೀವನ/ ಪ್ರಸಿದ್ಧಿ: 


> ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ,ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಣಾತರು.


> ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ಧೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ.

> ಸಂತರು ನಾಡಿನಲ್ಲಿ ಬಹಳ ಜನ ಇದ್ದರು, ಈಗಲೂ ಇದ್ದಾರೆ. ಆದರೆ ಜ್ಞಾನಯೋಗಿಗಳು ಬಹಳ ಅಪರೂಪ. ಅಂಥವರಲ್ಲೊಬ್ಬರು ಶ್ರೀ ಸಿದ್ಧೇಶ್ವರ ಸ್ವಾಮಿಗಳು. ಬಿಜಾಪುರ(ವಿಜಯಪುರ)ದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರ.

> ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮ ಇವರ ಗುರುಗಳಾದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂತು. ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು.

> ನಿಸ್ವಾರ್ಥ ಸೇವೆ, ಮಮಕಾರಗಳಿಲ್ಲದೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಆಶ್ರಯತಾಣವಾಗಿ ಬೆಳೆಯಿತು. ಪೂಜ್ಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಪ್ರವಚನದ ಮೂಲಕ ಜನರಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗುತ್ತಿದ್ದರು.

> ಶ್ರೀ ಸಿದ್ಧೇಶ್ವರ ಸ್ವಾಮಿಜಿಯವರ ಸರಳತೆ, ಯೋಗದ ಮನೋಭಾವಗಳು, ಸಹಾನುಭೂತಿ, ಆಧ್ಯಾತ್ಮಿಕ ಸಮಸ್ಯೆಗಳಿಗೆ ಸೃಜನಶೀಲ ವಿಧಾನ ಮತ್ತು ಅವರ ಹೋಲಿಸಲಾಗದ ಶಾಂತ ಮತ್ತು ಸಂಯೋಜನೆ ನಿಜವಾಗಿಯೂ ಪ್ರೇಕ್ಷಕರು ಉತ್ಸಾಹದಿಂದ ಮತ್ತು ಪ್ರಬುದ್ಧರಾಗಿದ್ದಾರೆ. ಅವರ ಪ್ರವಚನವು ಅವರ ನಿಖರತೆ ಮತ್ತು ನುಗ್ಗುವಿಕೆಗೆ ಹೆಸರುವಾಸಿಯಾಗಿದೆ.


ಸಿದ್ದೇಶ್ವರ ಮಹಾಸ್ವಾಮಿಗಳು ಮತ್ತು ಪ್ರಶಸ್ತಿಗಳು


> ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ ಎಂದ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

> ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು? ಎಂಬ ಪ್ರಶ್ನೆಗೆ, “ಅವರು ಆಧ್ಯಾತ್ಮ ಆದರ್ಶ ಮತ್ತು ನೈತಿಕತೆ ಬಗ್ಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ.


ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದು,'' ಎಂದು ಸ್ವಾಮೀಜಿಯನ್ನು ಹತ್ತಿರದಿಂದ ಕಂಡಿರುವವರೊಬ್ಬರು ಹೇಳುತ್ತಾರೆ.


ಸಿದ್ದೇಶ್ವರ ಮಾಹಸ್ವಾಮಿಗಳ ಜೀವನ ಶೈಲಿ


> ಶ್ರೀ ಸಿದ್ದೇಶ್ವರ ಸ್ವಾಮಿಜಿಯವರು ಸರಳವಾದ ಸ್ಫೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದಾರೆ.

> ತತ್ವಜ್ಞಾನಿ, ಆಲೋಚಕ ಸ್ವಾಮಿಜಿ ಪ್ರಪಂಚದಾದ್ಯಂತ ಆಧ್ಯಾತ್ಮಿಕ ಪ್ರವಚನಗಳನ್ನು ವಿತರಿಸಿದ್ದಾರೆ.

> ಅವರು ಆಧ್ಯಾತ್ಮಿಕತೆಗೆ ಮೀಸಲಿಟ್ಟಿದ್ದಾರೆ ಮತ್ತು ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.

> ವೇದಾಂತ, ಗೀತಾ, ಯೋಗಸೂತ್ರ, ವಚನಗಳ ಕುರಿತಾದ ಶ್ರೀ ಸ್ವಾಮಿಜಿಯವರ ಉಪನ್ಯಾಸಗಳು ಅವುಗಳ ಮೂಲತೆ, ಚಿಂತನೆ,

ಅಭಿವ್ಯಕ್ತಿ ಮತ್ತು ಚಿಂತನೆಗಾಗಿ ಹೆಸರುವಾಸಿಯಾಗಿದೆ.

> ಶ್ರೀ ಸ್ವಾಮೀಜಿ ಅವರು ತಮ್ಮ ಪಂಥಜಿಯವರ "ಪಥಜಲಿಯ ಯೋಗಶಾತ್ರ" ವನ್ನು ಮಹಾನ್ ಪಾಂಡಿತ್ಯಪೂರ್ಣ ಪಾಂಡಿತ್ಯದೊಂದಿಗೆ ಸಂಪಾದಿಸಿದ್ದಾರೆ.


ಸಿದ್ದೇಶ್ವರ ಮಹಾಸ್ವಾಮಿಗಳು ಇನ್ನಿಲ್ಲ:


> ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸೋಮವಾರ (ಜನವರಿ 02) ಇಹಲೋಕ ತ್ಯಜಿಸಿದ್ದಾರೆ.

No comments:

Post a Comment

If you have any doubts please let me know

ಪಿಡಿಎಫ್ ನೋಟ್ಸ್ ಗಳು ಡೌನ್‍ಲೋಡ್ ಆಗುತ್ತಿಲ್ಲವೇ? ಹಾಗಾದರೆ ಈ ವೀಡಿಯೋ ನೋಡಿ

Popular Posts

Facebook

Buy Products

ಪ್ರಚಲಿತ ಪೋಸ್ಟ್‌ಗಳು

Most Useful Notes

Labels

Buy Products

Random Posts

Buy Products

Most Useful Notes

Recent Posts

Useful PDF Notes

Important PDF Notes

Ads